ಕೊಲಂಬೋ: ನೆರೆಯ ದ್ವೀಪರಾಷ್ಟ್ರ ಶ್ರೀಲಂಕಾದ ಮುಸ್ಲಿಂ ಮೂಲಭೂತವಾದಕ್ಕೆ ತೆರೆ ಎಳೆಯಲು ಸ್ಥಳೀಯ ಸರ್ಕಾರ ಇದರ ಪ್ರಾಥಮಿಕ ಹಂತದ ಕ್ರಮವಾಗಿ, ದೇಶದಲ್ಲಿ ಬುರ್ಖಾ ನಿಷೇಧಿಸಿ ಸಾವಿರಾರು ಇಸ್ಲಾಮಿಕ್ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಶ್ರೀಲಂಕಾ ಸಾರ್ವಜನಿಕ ಭದ್ರತಾ ಸಚಿವ ಶರತ್ ವೀರಶೇಖರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದೆ. ರಾಷ್ಟ್ರದ ಭದ್ರತೆ ದೃಷ್ಟಿಯಿಂದ ಬುರ್ಖಾ ಧರಿಸುವುದನ್ನು ನಿಷೇಧಿಸಲು ನಿರ್ಧರಿಸಲಾಗಿದೆ. ಈ ಹಿಂದೆ ಶ್ರೀಲಂಕಾದ ಮುಸ್ಲಿಂ ಮಹಿಳೆಯರು ಮುಖ ಮುಚ್ಚುವಂತೆ ಬುರ್ಖಾ ಧರಿಸಿರುವುದನ್ನು ನಾವು ನೋಡಿಲ್ಲ, […]