ಮುಂಬೈ: ಕರೋನಾ ಪ್ರಕರಣಗಳು ಇಳಿಕೆಯಾದ ಬೆನ್ನಲ್ಲೇ ಮಹಾರಾಷ್ಟ್ರ ಕ್ಯಾಬಿನೆಟ್ ರಾಜ್ಯದಾದ್ಯಂತ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಏ.2 ರಿಂದ ಈ ಆದೇಶ ಜಾರಿಗೆ ಬರಲಿದೆ. ಮಹಾರಾಷ್ಟ್ರದಲ್ಲಿ ಪ್ರಕರಣಗಳು ಕಡಿಮೆ ಯಾಗಿವೆ. ಕೇಂದ್ರವು ವಿಪತ್ತು ನಿರ್ವಹಣಾ ಕಾಯಿದೆಯ ನಿಬಂಧನೆಗಳನ್ನು ಹಿಂತೆಗೆದು ಕೊಳ್ಳುವ ಸೂಚನೆ ಹಿನ್ನೆಲೆಯಲ್ಲಿ ಈ ಸಡಿಲಿಕೆ ಮಾಡಲಾಗಿದೆ. ಕರೋನಾ ಕ್ಷೀಣಿಸು ತ್ತಲೇ ಇರುವುದರಿಂದ ಮುಂದಿನ ಶನಿವಾರದಿಂದ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ಸಾರ್ವಜನಿಕ ಸ್ಥಳ ಗಳಲ್ಲಿ ಮಾಸ್ಕ್ ಬಳಸಲು ಜನರಿಗೆ […]