ನವದೆಹಲಿ: ಸೆ.8ರಂದು ನಿಧನರಾದ ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಗೌರವಾರ್ಥವಾಗಿ ದೇಶದಲ್ಲಿ ಭಾನುವಾರ ಶೋಕಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಕೆಂಪು ಕೋಟೆ ಮತ್ತು ರಾಷ್ಟ್ರಪತಿ ಭವನ ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜ ವನ್ನು ಅರ್ಧಕ್ಕೆ ಇಳಿಸಲಾಗಿದೆ. ಶೋಕಾಚರಣೆಯ ದಿನ, ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ದೇಶದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಇದೇ ವೇಳೆ ಯಾವುದೇ ಮನರಂಜನೆ ಇರುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಏಳು ದಶಕಗಳ ಕಾಲ ಬ್ರಿಟನ್ ರಾಣಿಯಾಗಿದ್ದ ಎರಡನೇ […]