ನವದೆಹಲಿ: ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ನಾಗರೀಕರು ಹಾಗೂ ಯೋಧರ ಜೀವ ತೆಗೆದ ಘಟನೆಗೆ ಸಂಬಂಧಿಸಿದಂತೆ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿರುವ ಭಾರತ ಈ ಮೂಲಕ ಪಾಕಿಸ್ತಾನದ ದುರ್ವರ್ತನೆೆಗೆ ಪ್ರತಿಭಟನೆ ವ್ಯಕ್ತಪಡಿಸಿದೆ. ಪಾಕಿಸ್ತಾನದ ಪಡೆಗಳು ಮುಗ್ಧ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ಭಾರತವು ತೀವ್ರವಾಗಿ ಖಂಡಿಸು ತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆ ನ.13ರಂದು ಕದನ ವಿರಾಮ ಉಲ್ಲಂಘನೆ ಮಾಡಿ ನಾಲ್ವರು ನಾಗರೀಕರು […]