ವಾಷಿಂಗ್ಟನ್ ಡಿಸಿ: ಅಮೆರಿಕದ ಬರ್ಲಿಂಗ್ಟನ್‌ನಲ್ಲಿ ಪ್ಯಾಲೆಸ್ಟೈನ್ ಮೂಲದ ಮೂವರು ಯುವಕರ ಮೇಲೆ ಗುಂಡಿನ ದಾಳಿ ನಡೆದಿದೆ. ಮೂವರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಬರ್ಲಿಂಗ್‌ಟನ್ ಸಿಟಿಯ ವರ್ಮೊಂಟ್‌ನಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿಗಳು ಬರ್ಲಿಂಗ್ಟನ್‌ನಲ್ಲಿ ಸಂಬಂಧಿಕರನ್ನು ಭೇಟಿಯಾದ ನಂತರ ಪ್ರಾಸ್ಪೆಕ್ಟ್ ಸ್ಟ್ರೀಟ್‌ನಲ್ಲಿ ತಿರುಗಾಡುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವರ್ಮೊಂಟ್ ವಿಶ್ವವಿದ್ಯಾಲಯದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಇಬ್ಬರ ಸ್ಥಿತಿ ಸ್ಥಿರವಾಗಿದ್ದರೆ, ಒಬ್ಬರ ಸ್ಥಿತಿ ಗಂಭೀರವಾಗಿದೆ. ದಾಳಿಕೋರನೊಬ್ಬ ಏಕಾಏಕಿ ನಾಲ್ಕು ಗುಂಡುಗಳನ್ನು ಹಾರಿಸಿ ಪರಾರಿಯಾಗಿದ್ದಾನೆ. ಇಬ್ಬರು […]