ಮಹಾನ್ ಮಾನವತಾವಾದಿಯಾಗಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ (Pandit Deendayal Upadhyaya Birthday) ಅವರು ಕಮ್ಯುನಿಸಂ ಮತ್ತು ಬಂಡವಾಳಶಾಹಿಗಳೆರಡರ ವಿರೋಧಿಯಾಗಿದ್ದರು. ಅವರ ಸಮಗ್ರ ಮಾನವತಾವಾದದ ಚಿಂತನೆಯು ಸೃಷ್ಟಿಯ ನಿಯಮಗಳು ಮತ್ತು ಮಾನವ ಜನಾಂಗದ ಸಾರ್ವತ್ರಿಕ ಅಗತ್ಯಗಳಿಗೆ ಅನುಗುಣವಾಗಿ ರಾಜಕೀಯ ಚಟುವಟಿಕೆ ಮತ್ತು ರಾಜ್ಯಕಾರ್ಯಕ್ಕೆ ಸಮಗ್ರ ಪರ್ಯಾಯ ದೃಷ್ಟಿಕೋನವನ್ನು ನೀಡುತ್ತದೆ.
ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಉಪಾಧ್ಯಾಯ ಅವರು, ಬಡವರು ಮತ್ತು ಮಧ್ಯಮ ವರ್ಗದ ಜನ ಜೀವನವನ್ನು ಸುಧಾರಿಸಲು ಅನೇಕ ಪ್ರಯತ್ನಗಳನ್ನು ನಡೆಸಿದ್ದಾರೆ....