ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನೀಡ ಲಾಗಿದ್ದ ಮಧ್ಯಂತರ ಜಾಮೀನನ್ನು ಮಾ.17ರವರೆಗೂ ಸುಪ್ರೀಂಕೋರ್ಟ್ ವಿಸ್ತರಿಸಿದೆ. ಈ ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ಪವನ್ ಖೇರಾ ಅವರನ್ನು ಬಂಧಿಸಿದ್ದರು. ಸಮಯ ಮೀರಿದ್ದರಿಂದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು. ಉತ್ತರ ಪ್ರದೇಶ ಮತ್ತು ಅಸ್ಸಾಂನ ಪ್ರತಿಕ್ರಿಯೆ ದಾಖಲಿಸಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಪೀಠ, […]