ನವದೆಹಲಿ: ರಾಮ್ ವಿಲಾಸ್ ಪಾಸ್ವಾನ್ ನಿಧನದ ಬಳಿಕ ರೈಲ್ವೆ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೊಯಲ್ ಅವರಿಗೆ ಹೆಚ್ಚುವರಿಯಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ಹೊಣೆ ಯನ್ನು ವಹಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಹೊಣೆಯನ್ನು ಗೊಯಲ್ ಅವರಿಗೆ ಹಿಸಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಹೊಣೆ ಹೊತ್ತಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರು ಕಳೆದ ಗುರು ವಾರ ಹೃದಯ ಸಮಸ್ಯೆಯಿಂದ ಮೃತಪಟ್ಟಿದ್ದರು.