ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‌ಬ್ಲೇರ್ ಪ್ರದೇಶದಲ್ಲಿ ಇಂದು ಮುಂಜಾನೆ 5:07 ರ ಸುಮಾರಿಗೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‌ಬ್ಲೇರ್ ಪ್ರದೇಶದಲ್ಲಿ ಬೂಮಿಯಿಂದ 10 ಕಿಮೀ ಆಳದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೋರ್ಟ್ ಬ್ಲೇರ್ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇರ್‌ನಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ. ಮಂಗಳವಾರ ಬ್ಲೇರ್‌ನಿಂದ ಆಗ್ನೇಯಕ್ಕೆ 187 ಕಿಮೀ ದೂರದಲ್ಲಿ ಮತ್ತು...