ತುಮಕೂರು: ಬಿಜೆಪಿಯ ಡಬಲ್ ಇಂಜಿನ್ ಸರಕಾರದ ದುರಾಡಳಿತ ನೀತಿಗಳನ್ನು ಮನೆ ಮನೆಗೆ ತಿಳಿಸುವ ನಿಟ್ಟಿನಲ್ಲಿ ಕೆಪಿಸಿಸಿ ವತಿಯಿಂದ ಜ.24ಕ್ಕೆ ಪ್ರಜಾಧ್ವನಿ ಬಸ್ಯಾತ್ರೆ ಕೈಗೊಳ್ಳಲಾಗಿದೆ ಎಂದು ಮಾಜಿ ಉಪಮುಖ್ಯ ಮಂತ್ರಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮ ಯಶಸ್ವಿಗೊಳಿಸುವ ಮೂಲಕ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಗೆಲುವು ಸಾಧಿಸ ಲಿದೆ ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತ ರು ಮಾಡಬೇಕೆಂದು ಮನವಿ ಮಾಡಿದರು. ಈಗಾಗಲೇ ಚಿತ್ರದುರ್ಗದಲ್ಲಿ […]