ಚೆನ್ನೈ: ತಮಿಳುನಾಡಿನಲ್ಲಿ ೧೨ನೇ ತರಗತಿಯ ಮತ್ತೋರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಎರಡು ವಾರಗಳ ಅವಧಿಯಲ್ಲಿ ವರದಿಯಾಗಿರುವ ನಾಲ್ಕನೇ ಪ್ರಕರಣ ಇದಾಗಿದೆ. ತಮಿಳುನಾಡಿನ ವಿರುಧ್‌ನಗರ್‌ದಲ್ಲಿ 17 ವರ್ಷದ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ. 12ನೇ ತರಗತಿಯ ಇತರ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಆತಂಕಕ್ಕೆ ಕಾರಣವಾಗಿದೆ. ಅಯ್ಯಂಪಟ್ಟಿ ಗ್ರಾಮದ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿನ ಕುರಿತು ಪ್ರಕರಣ ದಾಖಲಾಗಿದೆ.