ಪುಣೆ: ಮರಾಠ ಯೋಧ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಹೇಳಿಕೆ ವಿರೋಧಿಸಿ ವಿರೋಧ ಪಕ್ಷಗಳು ಮತ್ತು ಇತರ ಸಾಮಾಜಿಕ ಸಂಘಟನೆಗಳು ಮಂಗಳವಾರ ‘ಬಂದ್’ಗೆ ಕರೆ ನೀಡಿವೆ. ಮಹಾರಾಷ್ಟ್ರದ ಪುಣೆ ನಗರದಲ್ಲಿ ವ್ಯಾಪಾರಿಗಳ ಸಂಘಟನೆಯು ‘ಬಂದ್’ಗೆ ಬೆಂಬಲ ನೀಡಲು ನಿರ್ಧರಿಸಿದೆ. ಕಾಂಗ್ರೆಸ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ), ಶಿವಸೇನೆ, ಸಂಭಾಜಿ ಬ್ರಿಗೇಡ್ ಮತ್ತು ಇತರ ಕೆಲವು ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ರಾಜ್ಯಪಾಲರ ಹೇಳಿಕೆ ಖಂಡಿಸಿ ಕರೆ ನೀಡಿರುವ ಬಂದ್ಗೆ ಬೆಂಬಲ […]