ಚಂಡೀಗಢ: ಪಂಜಾಬ್ ರಾಜ್ಯಪಾಲ ಹಾಗೂ ಕೇಂದ್ರಾಡಳಿತ ಪ್ರದೇಶ ಚಂಡೀಗಢದ ಆಡಳಿತಾಧಿಕಾರಿ ಭನ್ವರಿಲಾಲ್ ಪುರೋಹಿತ್ ಅವರು ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ನಾನು ನನ್ನ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ರವಾನಿಸಿದ್ದಾರೆ. ಶುಕ್ರವಾರ ಪುರೋಹಿತ್ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಬಂದಿದ್ದರು. ಮಹಾರಾಷ್ಟ್ರದ ನಾಗ್ಪುರದಿಂದ ಮೂರು ಬಾರಿ ಲೋಕಸಭಾ ಸದಸ್ಯರಾಗಿದ್ದ ಪುರೋಹಿತ್ ಅವರು, ಈ ಮೊದಲು ತಮಿಳುನಾಡಿನ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. […]