ಚಂಡೀಗಢ: ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ ನೀಡುವ ಮಸೂದೆ ಕುರಿತು ಸರ್ಕಾರವು ಶನಿವಾರ ಅಧಿಸೂಚನೆ ಹೊರಡಿಸಿದೆ. ಪಂಜಾಬ್ ಶಾಸಕರ (ಪಿಂಚಣಿ ಮತ್ತು ವೈದ್ಯಕೀಯ ಸೌಲಭ್ಯಗಳ ನಿಯಂತ್ರಣ) ತಿದ್ದುಪಡಿ ಮಸೂದೆ- 2022 ಅನ್ನು ಪಂಜಾಬ್ ವಿಧಾನಸಭೆಯಲ್ಲಿ ಜೂನ್ 30 ರಂದು ಅಂಗೀಕರಿಸಲಾಗಿತ್ತು. ಒಬ್ಬ ಶಾಸಕ-ಒಂದು ಪಿಂಚಣಿ’ ಮಸೂದೆಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿ ದ್ದಾರೆ ಎಂದು ಪಂಜಾಬಿಗಳಿಗೆ ತಿಳಿಸಲು ನನಗೆ ತುಂಬಾ ಸಂತೋಷವಾಗಿದೆ. ಸರ್ಕಾರವು ಅಧಿಸೂಚನೆ ಹೊರಡಿಸಿದೆ’ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಟ್ವಿಟರ್ನಲ್ಲಿ ಹೇಳಿದ್ದಾರೆ. […]