ನವದೆಹಲಿ: ಒಂದು ವಾರದವರೆಗೆ ಪಂಜಾಬ್ ಶಾಸಕ ಸಿಮರ್‌ಜೀತ್ ಸಿಂಗ್ ಬೇಯ್ನ್ಸ್ ಅವರನ್ನು ಬಂಧಿಸದಂತೆ ಪಂಜಾಬ್ ಪೊಲೀಸರಿಗೆ ಸುಪ್ರೀಂಕೋರ್ಟ್ ಗುರುವಾರ ನಿರ್ದೇಶನ ನೀಡಿದೆ. ಲೋಕ್ ಇನ್ಸಾಫ್ ಪಕ್ಷದ ಮುಖ್ಯಸ್ಥರೂ ಆಗಿರುವ ಸಿಂಗ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಸಿಂಗ್ ನ್ಯಾಯಾಲಯದೆದುರು ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ, ಲೂಧಿಯಾನ ಕೋರ್ಟ್, ಬಂಧನ ವಾರೆಂಟ್ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ, ಸಿಂಗ್ ಸುಪ್ರೀಂ ಮೆಟ್ಟಿಲೇರಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ, ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ಹಿಮಾ ಕೊಹ್ಲಿ […]