ಕಡಲ ರಕ್ಷಣಾ ಸಾಮರ್ಥ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ ಭಾರತೀಯ ನೌಕಾಪಡೆಯು ಫ್ರಾನ್ಸ್ ನ ಡಸಾಲ್ಟ್ ಏವಿಯೇಷನ್ನೊಂದಿಗೆ 26 ರಫೇಲ್ ಎಂ (Rafale M Deal) ಫೈಟರ್ ಜೆಟ್ಗಳ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧತೆ ನಡೆಸಿದೆ. ಈ ಕುರಿತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರು ದೃಢಪಡಿಸಿದ್ದಾರೆ.