ನಾಗ್ಪುರ: ಸದನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಅನರ್ಹತೆ ಅರ್ಜಿಗಳ ವಿಚಾರಣೆ ನಡೆಸಲು ಹೆಚ್ಚುವರಿ ಗಂಟೆಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ. ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಇಂದಿನಿಂದ ಡಿ.20 ರವರೆಗೆ ನಾಗ್ಪುರದಲ್ಲಿ ನಡೆಯಲಿದೆ. ಶಾಸಕಾಂಗ ಸಭೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ನನ್ನ ಮುಂದೆ ಬಾಕಿ ಇರುವ ಅನರ್ಹತೆಯ ವಿಚಾರಣೆಯನ್ನು ಪೂರ್ಣ ಗೊಳಿಸಬೇಕು. ಎರಡೂ ಜವಾಬ್ದಾರಿಗಳಿಗೆ ನ್ಯಾಯ ಒದಗಿಸಲು ನಾನು ಈ ಅವಧಿಯಲ್ಲಿ ಬೆಳಿಗ್ಗೆ 9 ರಿಂದ ರಾತ್ರಿ 10 […]