ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ರಾಜ್ಯಾದ್ಯಂತ ಈವರೆಗೆ 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಗುರುವಾರ ಒಂದೇ ದಿನ ವಿವಿಧ ತನಿಖಾ ಸಂಸ್ಥೆಗಳು 4.60 ಕೋಟಿ ರೂ. ನಗದನ್ನು ಜಪ್ತಿ ಮಾಡಿವೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರಾಜ್ಯದಲ್ಲಿ ಒಟ್ಟು 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ 1.91 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ. 85 ಲಕ್ಷ […]