Thursday, 19th September 2024

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಮಹಿಳೆ ಸೇರಿ ಇಬ್ಬರ ಸಾವು

ಮುಂಬೈ: ಮಹಾರಾಷ್ಟ್ರ ರಾಜ್ಯದ ರಾಯ್ ಗಾಡ್ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. ರಾಯ್ ಗಾಡ್ ಜಿಲ್ಲೆಯ ಖೊಪೊಲಿ ಪಟ್ಟಣದ ಸಜ್ಗೌನ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಫ್ಯಾಕ್ಟರಿಯಲ್ಲಿ ಈ ಸ್ಪೋಟ ಸಂಭವಿಸಿದ್ದು ನಂತರ ಫ್ಯಾಕ್ಟರಿಯ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿತು. ಮೃತರಲ್ಲಿ ಒಬ್ಬ ಮಹಿಳೆ ಕೂಡ ಸೇರಿದ್ದಾರೆ. ಇತರ ಆರು ಮಂದಿಗೆ ಗಾಯವಾಗಿದೆ. ಘಟನೆ ನಡೆದ ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು […]

ಮುಂದೆ ಓದಿ