ರಾಯ್‌ಪುರ: ರಾಯ್‌ಪುರದ ವಿಧಾನಸಭಾ ಕ್ಷೇತ್ರದ ಎಲ್ಲಾ 201 ಮತಗಟ್ಟೆಗಳಲ್ಲಿ ಸಂಪೂರ್ಣ ಮತದಾನ ಪ್ರಕ್ರಿಯೆಯ ಹೊಣೆಗಾರಿಕೆಯನ್ನು ಮಹಿಳೆಯರಿಗೆ ವಹಿಸಲಾಗಿದೆ. ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿಯೇ ಮಹಿಳೆಯರು ವಿಧಾನಸಭೆಯ ಸಂಪೂರ್ಣ ಜವಾಬ್ದಾರಿ ನಿಭಾಯಿ ಸುತ್ತಿರುವುದು ಇದೇ ಮೊದಲು ಎಂದು ಅಧಿಕಾರಿಗಳು ಹೇಳಿದ್ದಾರೆ. ರಾಜ್ಯದಲ್ಲಿ 70 ಸ್ಥಾನಗಳಿಗೆ ನಡೆಯುತ್ತಿರುವ ಎರಡನೇ ಮತ್ತು ಅಂತಿಮ ಹಂತದ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ. ರಾಯ್‌ಪುರ ನಗರದ ಉತ್ತರ ಕ್ಷೇತ್ರದಲ್ಲಿ 201 ಮತಗಟ್ಟೆಗಳಿದ್ದು, ಎಲ್ಲವೂ ‘ಸಂಗ್ವಾರಿ ಬೂತ್’ ಆಗಿವೆ. ಅಧ್ಯಕ್ಷರಿಂದ […]