ಜೈಪುರ: ರಾಜಸ್ಥಾನದಲ್ಲಿ ಹೊಸದಾಗಿ ಚುನಾಯಿತರಾದ ಭಾರತೀಯ ಜನತಾ ಪಕ್ಷದ ಶಾಸಕರು ಮಂಗಳವಾರ ಸಭೆ ಸೇರಲಿದ್ದು, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಪಕ್ಷದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇಬ್ಬರು ಸಹ ವೀಕ್ಷಕರಾದ ವಿನೋದ್ ತಾವ್ಡೆ ಮತ್ತು ಸರೋಜ್ ಪಾಂಡೆ ಪಕ್ಷದ ಸಭೆಗೆ ಆಗಮಿಸಲಿದ್ದಾರೆ. ಮಂಗಳವಾರ ಸಂಜೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ನೂತನ ವಾಗಿ ಆಯ್ಕೆಯಾಗಿರುವ ಬಿಜೆಪಿಯ ಎಲ್ಲಾ ಶಾಸಕರ ನೋಂದಣಿ ಮಧ್ಯಾಹ್ನ ಆರಂಭವಾಗಲಿದೆ […]