ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಸೋಮವಾರ ಆರಂಭವಾಗಿ, ರಾಜ್ಯಸಭಾ ಕಲಾಪ ತೀವ್ರ ಗದ್ದಲ, ಕೋಲಾಹಲ, ಆರೋಪ-ಪ್ರತ್ಯಾರೋಪಗಳಲ್ಲಿ ಸಾಗಿದ್ದರಿಂದ ಸಭಾಪತಿಗಳು ಮಧ್ಯಾಹ್ನ 1 ಗಂಟೆಗೆ ಮುಂದೂಡಿದರು. ಇಂಧನ ಬೆಲೆ ಹೆಚ್ಚಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಬೇಕೆಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸಿದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ ಪಿಜೆ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಯಬೇಕೆಂದು ನೊಟೀಸ್ ನೀಡಿದರು. ಪ್ರಶ್ನೋತ್ತರ ಅವಧಿಯನ್ನು ಬಯಸದಿದ್ದರೆ, ಜನರನ್ನು ವಂಚಿಸಲು […]