ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ರನ್ನರ್ಅಪ್ ಗುಜರಾತ್ ಟೈಟಾನ್ಸ್ ತಂಡಗಳು ಐಪಿಎಲ್-17ರಲ್ಲಿ ಶನಿವಾರ ಮರುಮುಖಾಮುಖಿ ಆಗಲಿವೆ. ಮತದಾನದಿಂದಾಗಿ 18 ದಿನಗಳಿಂದ ತವರಿನಿಂದ ದೂರವಿದ್ದ ಆರ್ಸಿಬಿ ಇದೀಗ ಮತ್ತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿದೆ. ಕಳೆದ ಭಾನುವಾರವಷ್ಟೇ ಉಭಯ ತಂಡಗಳ ನಡುವೆ ಅಹಮದಾಬಾದ್ನಲ್ಲಿ ನಡೆದ ಪಂದ್ಯದಲ್ಲಿ ಗೆದ್ದ ವಿಶ್ವಾಸದಲ್ಲಿರುವ ಫಾಫ್ ಡು ಪ್ಲೆಸಿಸ್ ಪಡೆ ಅದೇ ಫಲಿತಾಂಶ ಪುನರಾವರ್ತಿಸುವ ಹರುಪಿನಲ್ಲಿದ್ದರೆ, ಗುಜರಾತ್ ಟೈಟಾನ್ಸ್ ತಂಡ ಸೇಡು ತೀರಿಸಿಕೊಳ್ಳುವ ಹಂಬಲದಲ್ಲಿದೆ. ಪ್ಲೇಆ ಆಸೆಯನ್ನು ಬಹುತೇಕ ಕೈಚೆಲ್ಲಿರುವ ಆರ್ಸಿಬಿ ಕಳೆದೆರಡು […]