ಹೈದರಾಬಾದ್: ಎದುರಾಳಿಗಳ ಬೌಲಿಂಗ್ ಅನ್ನು ನಿರ್ದಯವಾಗಿ ದಂಡಿಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ, ಅಂಕಪಟ್ಟಿಯ ತಳದಲ್ಲಿರುವ ರಾಯಲ್ ಚಾಲೆಂಜರ್ ಬೆಂಗಳೂರು ತಂಡಗಳು ಗುರುವಾರ ಐಪಿಎಲ್ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಬೆಂಗಳೂರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಹೈದರಾಬಾದ್ ಬೌಲಿಂಗ್ ಮಾಡುತ್ತಿದೆ. ಐಪಿಎಲ್‌ನ ಈ ಆವೃತ್ತಿಯೊಂದರಲ್ಲೇ ಹೈದರಾಬಾದ್ ತಂಡ ಮೂರು ಬಾರಿ 250ಕ್ಕಿಂತ ಹೆಚ್ಚು ಮೊತ್ತ ಪೇರಿಸಿದೆ. ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿದೆ. ದುರ್ಬಲ ಬೌಲಿಂಗ್ ಹೊಂದಿರುವ ಆರ್‌ಸಿಬಿ ವಿರುದ್ಧವೂ ಹೈದರಾಬಾದ್ ತನ್ನ ದಂಡಯಾತ್ರೆಯನ್ನು ಮುಂದುವರಿಸಿದಲ್ಲಿ ಅಚ್ಚರಿಯೇನಿಲ್ಲ. ಆಡಿದ […]