ಬೆಂಗಳೂರು: ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆ ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ವಿರುದ್ಧ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿರ್ಮಾಪಕ, ನಿರ್ದೇಶಕ, ತೀರ್ಪುಗಾರರಾದ ನಟ ರಮೇಶ್ ಅರವಿಂದ್, ನಟಿ ಪ್ರೇಮಾ, ಸ್ಪರ್ಧಿ, ನಿರೂಪಕಿ ಅನುಶ್ರೀ ಹಾಗೂ ಇತರರ ವಿರುದ್ಧ ಚಿಕ್ಕನಾಯಕನಹಳ್ಳಿ ಪಟ್ಟಣದ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತೀಚಿಗೆ ಆರಂಭವಾದ ಈ ರಿಯಾಲಿಟಿ ಶೋ […]