ತಿರುವನಂತಪುರ: ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಲಯಾಳಂ ನಟಿ ರೇವತಿ ಸಂಪತ್ ವಿರುದ್ಧ ಮಲಯಾಳ ಚಲನಚಿತ್ರ ಕಲಾವಿದರ ಸಂಘ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ದೂರು ದಾಖಲಿಸಿದ್ದಾರೆ. ಸಿದ್ದಿಕ್ ಅವರು ಡಿಜಿಪಿಗೆ ದೂರು ಸಲ್ಲಿಸಿದ್ದಾರೆ ಎಂದು ಕೇರಳ ಪೊಲೀಸರು ಖಚಿತಪಡಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸಿದ್ದಿಕ್ ಅವರು ಮಲಯಾಳ ಚಲನಚಿತ್ರ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದರು. ಇತ್ತ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯಲ್ಲಿ ಪ್ರಸ್ತಾಪಿಸಿರುವ ನಟಿಯರ ಮೇಲಿನ ಲೈಂಗಿಕ […]