ಜೈಪುರ: ಈದ್ ಗೂ ಮುನ್ನ ಜೋಧ್ ಪುರದಲ್ಲಿ ನಡೆದ ಕೋಮು ಸಂಘರ್ಷಕ್ಕೆ ಸಂಬಂಧಿಸಿ ಇಲ್ಲಿಯ ವರೆಗೂ 211 ಜನರನ್ನು ಬಂಧಿಸಲಾಗಿದೆ. ಗುರುವಾರ ಕೂಡ ಹಿಂಸಾಚಾರ ಮುಂದುವರೆದಿದ್ದರಿಂದ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಯಾರಾದರೂ ಸುಳ್ಳು ವದಂತಿ ಹರಡುವವರ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಶಾಂತಿ ಮತ್ತು ಸೌಹಾರ್ದತೆ ಕೆಡಿಸಿದ್ದಕ್ಕಾಗಿ ಇಲ್ಲಿಯವರೆಗೂ 211 ಜನರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ಎಂಎಲ್ ಲಾಥರ್ […]