Sunday, 15th December 2024

51,000 ಜನರಿಗೆ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 9ನೇ ರೋಜ್‌ಗಾರ್ ಮೇಳದಲ್ಲಿ ಪಾಲ್ಗೊಂಡು ಹೊಸದಾಗಿ ನೇಮಕಗೊಂಡ ಸುಮಾರು 51,000 ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಧಾನಿ ಮೋದಿ ನೇಮಕಾತಿ ಪತ್ರ ಹಂಚಿದ್ದಾರೆ. ನೇಮಕಾತಿ ಪತ್ರಗಳನ್ನು ಸ್ವೀಕರಿಸಿದ ಯುವಕರಿಗೆ ಅಭಿನಂದಿಸಿದ್ದಾರೆ. ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ.

ಮುಂದೆ ಓದಿ