ಬೆಂಗಳೂರು: ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ರಂದು ಉಪ ಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ (ಪ್ರ) ಹಾಗೂ ಉಪಚುನಾವಣೆ ಅಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾಳೆಯಿಂದ ನವೆಂಬರ್ 18ರವರೆಗೂ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ನ.19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ನ.23ರವರೆಗೆ ಕಾಲಾವಕಾಶವಿದೆ. ಅವಶ್ಯವಿದ್ದಲ್ಲಿ ಡಿಸೆಂಬರ್ 1ರಂದು ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಬೆಳಗ್ಗೆ 9ರಿಂದ ಸಂಜೆ […]