ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ (81) ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಏ.17ರಂದು ಬೆಳಿಗ್ಗೆ ಚಾಮರಾಜಪೇಟೆಯ ಟಿಆರ್ ಮೀಲ್ನಲ್ಲಿ ನಡೆಯಲಿದೆ. ಬುಧವಾರ ಬೆಳಿಗ್ಗೆ 7.30ರ ನಂತರ ರವೀಂದ್ರ ಕಲಾಕ್ಷೆತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದರ್ಶನಕ್ಕೆ ದ್ವಾರಕೀಶ ಅವರ ಪಾರ್ಥೀವ ಶರೀರವು ಬುಧವಾರ ಬೆಳಗಿನ ಜಾವದವರೆಗು ಅವರ ನಿವಾಸದಲ್ಲಿಯೇ ಇರಲಿದ್ದು, ಗಣ್ಯರ ಮತ್ತು ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ […]