ಇಸ್ಲಾಮಾಬಾದ್: ಮಾನವ ಕಳ್ಳಸಾಗಣೆ ಆರೋಪ ಪ್ರಕರಣದ ಸಂಬಂಧ ಪಾಕಿಸ್ತಾನ ಮೂಲದ ಮಾನವ ಹಕ್ಕುಗಳ ಹೋರಾಟಗಾರ ಸರೀಮ್ ಬರ್ನಿ ಅವರನ್ನು ಬುಧವಾರ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 25ಕ್ಕೂ ಹೆಚ್ಚು ಮಕ್ಕಳನ್ನು ಕಳ್ಳಸಾಗಣೆ ಮಾಡಿದ ಹಾಗೂ ಅಮೆರಿಕದಲ್ಲಿ ಮಕ್ಕಳನ್ನು ಅಕ್ರಮವಾಗಿ ದತ್ತು ನೀಡುವ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಅಮೆರಿಕ ಸರ್ಕಾರ ಮಾಹಿತಿ ನೀಡಿತ್ತು. ಹೀಗಾಗಿ ಬರ್ನಿ ಅಮೆರಿಕದಿಂದ ಕರಾಚಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಮಾನವ ಕಳ್ಳಸಾಗಣೆ ಕುರಿತು ತನಿಖೆ ನಡೆಸುವ ತನಿಖಾ ಸಂಸ್ಥೆಯು (ಎಫ್‌ಐಎ) ಬಂಧಿಸಿದೆ ಎಂದು ವರದಿಯಾಗಿದೆ. […]