ಇಂಧೋರ್: ಆತಿಥೇಯ ಭಾರತ ಹಾಗೂ ಪ್ರವಾಸಿ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯ ಜ.14ರಂದು ಇಂಧೋರ್ ನಲ್ಲಿ ನಡೆಯಲಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ, 2ನೇ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಮೊದಲ ಪಂದ್ಯದಿಂದ ಹೊರ ಗುಳಿದಿದ್ದ ಟೀಂ ಇಂಡಿಯಾದ ಬ್ಯಾಟರ್ ವಿರಾಟ್ ಕೊಹ್ಲಿ, 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಇದಕ್ಕಾಗಿ ಈಗಾಗಲೇ ಇಂಧೋರ್ ತಲುಪಿರುವ ಕಿಂಗ್ ಕೊಹ್ಲಿ, ಕೆಲವು ಗಂಟೆಗಳ ಕಾಲ ನೆಟ್ಸ್‌ನಲ್ಲಿ ಅಭ್ಯಾಸ ಕೂಡ ನಡೆಸಿದ್ದಾರೆ. ಭಾರತ […]