ಗಾಂಧಿನಗರ: ಮೊದಲ ಸೆಮಿಕಂಡಕ್ಟರ್ ಚಿಪ್ ಉತ್ಪಾದನಾ ಘಟಕವನ್ನು ಗುಜರಾತ್‌ನಲ್ಲಿ ನಿರ್ಮಿಸಲು “ವೇದಾಂತ’ ಸಂಸ್ಥೆ ಸಿದ್ಧವಾಗಿದೆ. ಇದಕ್ಕಾಗಿ ತೈವಾನ್ ಮೂಲದ ಫಾಕ್ಸ್‌ಕಾನ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, 1.54 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಸಜ್ಜಾಗಿದೆ. ಅಹಮದಾಬಾದ್‌ನಲ್ಲಿ 1000 ಎಕರೆ ಜಾಗದಲ್ಲಿ ಈ ಘಟಕ ಸ್ಥಾಪನೆಯಾಗ ಲಿದ್ದು, ಅದರಲ್ಲಿ ಡಿಸ್ಪೆ ಹಬ್ ಘಟಕ, ಸೆಮಿಕಂಡಕ್ಟರ್ ಜೋಡಣೆ ಮತ್ತು ಪರೀಕ್ಷಾ ಘಟಕಗಳೂ ಇರಲಿವೆ. ಇದರಿಂದ ಸುಮಾರು 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ವೇದಾಂತ ಸಂಸ್ಥೆ ಮುಖ್ಯಸ್ಥ ಅನಿಲ್ ಅಗರ್ವಾಲ್ […]