ನವದೆಹಲಿ: ‘ಸಾರ್ವತ್ರಿಕ ಸ್ಥಾನಗಳ ಅರ್ಹತೆ’ ಪದ್ಧತಿಯಡಿಯಲ್ಲಿ ಕರ್ನಾಟಕದ ಶ್ರೀಹರಿ ನಟರಾಜ್ ಮತ್ತು ಮಾನಾ ಪಟೇಲ್ ಅವರು ಟೋಕಿಯೊ ಒಲಿಂಪಿಕ್ಸ್‌ಗೆ ನಾಮನಿರ್ದೇಶನಗೊಂಡಿದ್ದಾರೆ. ಭಾರತ ಈಜು ಫೆಡರೇಷನ್ (ಎಸ್‌ಎಫ್‌ಐ) ಮಂಗಳವಾರ ಇವರಿಬ್ಬರ ಹೆಸರುಗಳನ್ನು ಶಿಫಾರಸು ಮಾಡಿದೆ. ಸಾಮಾನ್ಯ ಅರ್ಹತಾ ಪ್ರಕ್ರಿಯೆ ಮೂಲಕ ಯಾರೂ ಆಯ್ಕೆಯಾಗದಿದ್ದಾಗ, ಹೆಚ್ಚು ಫಿನಾ ಪಾಯಿಂಟ್ಸ್ ಹೊಂದಿರುವ ತಲಾ ಒಬ್ಬ ಪುರುಷ ಹಾಗೂ ಮಹಿಳಾ ಈಜುಪಟುವನ್ನು ಶಿಫಾರಸು ಮಾಡುವ ಅವಕಾಶ ರಾಷ್ಟ್ರೀಯ ಫೆಡರೇಷನ್‌ಗೆ ಇತ್ತು. ಒಲಿಂಪಿಕ್ಸ್ ‘ಬಿ’ ಅರ್ಹತೆಯ ಪಾಯಿಂಟ್ಸ್‌ಗಳನ್ನು ಈ ಆಯ್ಕೆಗೆ ಪರಿಗಣಿಸಲಾಗುತ್ತದೆ. 100 ಮೀ. ಬ್ಯಾಕ್‌ಸ್ಟ್ರೋಕ್ […]