ನವದೆಹಲಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP Law) ನೀಡುವ ಕುರಿತು ಕಾನೂನು ಜಾರಿಗೊಳಿಸಬೇಕು ಎಂದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಂಭು ಗಡಿಯಲ್ಲಿ(Shambhu border) ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು(ಶನಿವಾರ) 200 ದಿನಗಳನ್ನು ಪೂರೈಸಲಿದೆ. ಈ ನಿಟ್ಟಿನಲ್ಲಿ ರೈತರು ದೊಡ್ಡ ಮಟ್ಟದ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಈ ಸಮಾರಂಭದಲ್ಲಿ ಮಾಜಿ ಕುಸ್ತಿ ಆಟಗಾರ್ತಿ ವಿನೇಶ್ ಫೋಗಟ್(Vinesh Phogat) ಕೂಡ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತೀಚೆಗೆ ಮುಕ್ತಾಯ ಕಂಡಿದ್ದ ಪ್ಯಾರಿಸ್ ಒಲಿಂಪಿಕ್ಸ್ ಮಹಿಳಾ ಕುಸ್ತಿಯಲ್ಲಿ ವಿನೇಶ್ ನಿಗದಿತ […]