ಪಶ್ಚಿಮ ಬಂಗಾಳ: ಪಡಿತರ ವಿತರಣೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೊಂಗಾವ್ ಪುರಸಭೆಯ ಮಾಜಿ ಅಧ್ಯಕ್ಷ ಶಂಕರ್ ಅಧ್ಯ ಅವರನ್ನು ಇಡಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಆಧ್ಯಾ ಅವರ ಬಂಧನವ ವೇಳೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಷಹಜಹಾನ್ ಶೇಖ್ ಎಂಬಾತನ ನಿವಾಸದ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ಭದ್ರತಾ ಪಡೆಗಳ ತಂಡದ ಮೇಲೆಯೇ ಆತನ […]