ಚೆನ್ನೈ: ತಮಿಳುನಾಡಿನ ಕಲಾಕುರುಚ್ಚಿ ಜಿಲ್ಲೆಯ ಶಂಕರಾಪುರಂನ ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಕನಿಷ್ಠ 5 ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿಗಳು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಅಂಗಡಿ ಮಾಲೀಕ ಹಾಗೂ ಕೆಲಸಗಾರರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಗಾಯಗೊಂಡ 5 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಆಘಾತ ವ್ಯಕ್ತಪಡಿಸಿದ್ದು, ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿ ದ್ದಾರೆ.