ಬೆಂಗಳೂರು: ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ (shiva rajkumar) ಅವರಿಗೆ ಶಸ್ತ್ರ ಚಿಕಿತ್ಸೆ (Surgery) ಯಶಸ್ವಿಯಾಗಿದ್ದು, ಇದೀಗ ಮುಂದಿನ ಹಂತದ ಚಿಕಿತ್ಸೆಗಳಿಗಾಗಿ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ. ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ಎನ್ನಲಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ […]