ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ರೇಷ್ಮೆ ಬೆಳೆಗಾರರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ 250 ಕೋಟಿ ರ ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹಂತದ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ನೀಡುವ ಪ್ರೋತ್ಸಾಹಧನವನ್ನು ಪ್ರತಿ ಕೆಜಿಗೆ ರೂ.30 ಹೆಚ್ಚಳ ಮಾಡಲಾಗಿದೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹ ಧನ ನೀಡಲು 12 ಕೋಟಿ ರೂ […]