ಬೆಂಗಳೂರು: ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ಹಾಸ್ಯ ನಟಿ ಸುನೇತ್ರಾ ಪಂಡಿತ್ ಅವರ ದ್ವಿಚಕ್ರ ವಾಹನ ಅಪಘಾತಕ್ಕೀಡಾ ಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ವರದಿಯಾಗಿದೆ. ಶನಿವಾರ ತಡರಾತ್ರಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭ ದಲ್ಲಿ ಅಪಘಾತ ಸಂಭವಿಸಿದೆ. ಎನ್.ಆರ್. ಕಾಲೋನಿಯ 9ನೇ ಅಡ್ಡರಸ್ತೆಯಲ್ಲಿ ಅವೈಜ್ಞಾನಿಕ ಹಂಪ್ ಮತ್ತು ರಸ್ತೆ ಗುಂಡಿ ಕಾರಣದಿಂದ ಈ ಅಪಘಾತ ಸಂಭವಿ ಸಿದೆ ಎಂದು ಎನ್ನಲಾಗಿದೆ. ಅಪಘಾತದಲ್ಲಿ ಸುನೇತ್ರಾರಿಗೆ ಗಂಭೀರವಾದ ಗಾಯಗಳಾಗಿದೆ. ಸ್ಥಳೀಯರು ಸುನೇತ್ರ ಅವರನ್ನು ಬಸವನಗುಡಿಯ ಖಾಸಗಿ […]