ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಅವರು ಶನಿವಾರ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ದೆಹಲಿಯಲ್ಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತೆ, ಹಿನ್ನೆಲೆ ಗಾಯಕಿ ಅನುರಾಧಾ ಪೌಡ್ವಾಲ್ ಅವರು ಬಿಜೆಪಿಗೆ ಸೇರ್ಪಡೆಯಾದರು. ಬಳಿಕ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೌಡ್ವಾಲ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರು ಮತ್ತು ಅವರ ನೇತೃತ್ವದ ಪಕ್ಷಕ್ಕೆ ಸೇರಲು ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ […]