ಗ್ಯಾಂಗ್‌ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಸಿಎಂ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪ್ರೇಮ್ ಸಿಂಗ್ ತಮಾಂಗ್ ಅವರು ಇಂದು ಪಕ್ಷದ ನೂತನ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ರಾಜ್ಯಪಾಲರು ಎಲ್ಲಾ ಶಾಸಕರಿಗೆ ಅಭಿನಂದಿಸಿ ಶುಭ […]