ಮೈಸೂರು: ಕನ್ನಡ ಚಿತ್ರರಂಗದ ನಿರ್ದೇಶಕ, ನಟ ಎಸ್. ನಾರಾಯಣ್ ಪುತ್ರ ಪಂಕಜ್ ನಾರಾಯಣ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ರಕ್ಷಾ ಜೊತೆ ಪಂಕಜ್ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಈ ಜೋಡಿ ಸಪ್ತಪದಿ ತುಳಿದಿದೆ. ಕೇವಲ ಆಪ್ತರ ಸಮ್ಮುಖದಲ್ಲಿ ವಿವಾಹ ನಡೆದಿದೆ. ಪಂಕಜ್ ಮತ್ತು ರಕ್ಷಾ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕೊವಿಡ್ ಹರಡುವ ಭಯ, ಪುನೀತ್ ರಾಜ್ಕುಮಾರ್ ನಿಧನದ ನೋವು ಸೇರಿದಂತೆ ಹಲವು ಕಾರಣಗಳಿಂದಾಗಿ ಸಿಂಪಲ್ ಆಗಿ ಮದುವೆ ಮಾಡಲಾಗಿದೆ. […]