ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಕಂದಕಕ್ಕೆ ಉರುಳಿದ ಸೇನಾ ವಾಹನದಲ್ಲಿದ್ದ ಯೋಧರಲ್ಲಿ ಮೂವರು ಕರ್ನಾಟಕದ ಯೋಧರು (Soldiers death) ಮೃತಪಟ್ಟಿದ್ದು, ಹುತಾತ್ಮರಾದ ಯೋಧರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಮೃತ ಯೋಧರಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ, ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, […]