ನವದೆಹಲಿ: ಸೌಮ್ಯ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದ್ದು, ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅದ್ರಂತೆ, ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್ ಮಲಿಕ್ ಮತ್ತು ಅಜಯ್ ಕುಮಾರ್ ಈ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದವರು. ದೆಹಲಿಯ ಸಾಕೇತ್ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಶನಿವಾರ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನ ಘೋಷಿಸಿದ್ದು, ದಂಡವನ್ನೂ ವಿಧಿಸಿದೆ. ಇನ್ನು ಎಲ್ಲಾ ಅಪರಾಧಿಗಳಿಗೆ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. […]