Thursday, 19th September 2024

ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು: ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 19ರ ಗುರುವಾರ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಧ್ಯಾಹ್ನ 12.30 ಕ್ಕೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸ ಲಿದ್ದಾರೆ. ನಂತರ https://kseeb.jar.nic.in, https://SSLC.karnataka.gov.in, https://karresults.nic.in ವೆಬ್ಸೈಟ್ ಗಳಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಬಳಿಕ ಮೊಬೈಲ್ ಸಂಖ್ಯೆಗಳಿಗೂ ಸಂದೇಶ ಕಳುಹಿಸಲಾಗುತ್ತದೆ. ಮಾರ್ಚ್ 28 ರಿಂದ ಏಪ್ರಿಲ್ 1 ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆದಿದ್ದು, 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಮುಂದೆ ಓದಿ