ನವದೆಹಲಿ: ಕಬ್ಬಿನ ಬೆಳೆಯ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 290 ರೂಪಾಯಿಗೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಗೋಯಲ್, ಕಬ್ಬಿನ ಎಫ್‌ಆರ್‌ಪಿಯನ್ನು ಪ್ರತಿ ಕ್ವಿಂಟಾಲ್‌ಗೆ 290 ರೂ.ಗೆ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು. 2020ರ ಆಗಸ್ಟ್‌ನಲ್ಲಿ ಪ್ರತಿ ಕ್ವಿಂಟಾಲ್‌ಗೆ 5 ರೂ. ಅಂದರೆ 285 ರೂ.ಗೆ ಹೆಚ್ಚಿಸಲಾಗಿತ್ತು. 2019-2020 ರಲ್ಲಿ ನಿಗದಿಪಡಿಸಿದ ಬೆಲೆ ಪ್ರತಿ ಕ್ವಿಂಟಾಲ್‌ಗೆ […]