ಪಾಟನಾ: ಬಿಜೆಪಿ ವಿರೋಧಿ ಹಾಗೂ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಒಕ್ಕೂಟದ ಭಾಗವಾಗಿರುವ ಜನತಾ ದಳದ (ಯುನೈಟೆಡ್) ಲೋಕಸಭಾ ಸಂಸದ ಸುನೀಲ್ ಕುಮಾರ್ ಪಿಂಟು ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳ ಗೆಲುವು ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಮೇಜ್ ಸಹ ಹೆಚ್ಚಾಗಿದೆ. ಮೋದಿಯವರಿಂದಲೇ ಮೂರು ರಾಜ್ಯ ಗೆಲ್ಲುವಂತಾಗಿದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ನಂತರ ಸೀತಾಮರ್ಹಿ […]