ಸೂರತ್: ವಿಶ್ವದ ಅತಿದೊಡ್ಡ ಅತ್ಯಾಧುನಿಕ ಕೇಂದ್ರ ಸೂರತ್ ಡೈಮಂಡ್ ಬೋರ್ಸ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿ ದರು. ಈ ಕಟ್ಟಡವು 67 ಲಕ್ಷ ಚದರ್ ಅಡಿಗಿಂತ ಹೆಚ್ಚು ವಿಸ್ತೀರ್ಣದಲ್ಲಿ ತಲೆ ಎತ್ತಿದ್ದು, ವಿಶ್ವದ ಅತಿದೊಡ್ಡ ಕಚೇರಿ ಸಂಕೀರ್ಣ ಎಂಬ ಹೆಗ್ಗಳಿಕೆ ಪಡೆದಿದೆ. ಸೂರತ್ ಡೈಮಂಡ್ ಬೋರ್ಸ್ ಉದ್ಘಾಟನೆಗೂ ಮುನ್ನ 353 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡವನ್ನೂ ಪಿಎಂ ಮೋದಿ ಉದ್ಘಾಟಿಸಿದರು. ಬಳಿಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ […]