ತಿರುವನಂತಪುರಂ: ಪ್ರಸಾದವಾಗಿ ಸ್ವೀಕರಿಸುವ ಶಬರಿಮಲೆ ಅಯ್ಯಪ್ಪಸ್ವಾಮಿ ಅರವಣ ಪಾಯಸಂ ಪ್ರಸಾದದ ಮಾರಾಟಕ್ಕೆ ಕೇರಳ ಹೈಕೋರ್ಟ್ ನಿಷೇಧ ಹೇರಿದೆ. ಪ್ರಸಾದವೆಂದು ಸ್ವೀಕರಿಸುತ್ತಿದ್ದ ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆ ಯಾಗುವ ಏಲಕ್ಕಿಯನ್ನು ತಪಾಸಣೆಗೆ ಒಳಪಡಿಸಿದಾಗ ಅಸುರಕ್ಷಿತ ಕೀಟನಾಶಕದ ಪ್ರಮಾಣವು ಅಪಾಯಕಾರಿ ಮಟ್ಟದಲ್ಲಿರುವುದು ಪತ್ತೆ ಯಾಗಿದೆ. ಈ ಹಿನ್ನೆಲೆ ಕೇರಳ ಹೈಕೋರ್ಟ್‌ನ ಆದೇಶ ನೀಡಿದ್ದು, ಶಬರಿಮಲೆ ಮೈದಾನದಲ್ಲಿ ಅರವಣ ಪಾಯಸಂ ಮಾರಾಟ ಸಂಪೂರ್ಣ ಸ್ಥಗಿತಗೊಂಡಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್ ಎಸ್‌ಎಐ) ಸಂಶೋಧನೆಗಳ ಆಧಾರದ ಮೇಲೆ ನ್ಯಾಯಾಲಯವು ತಿರುವಾಂಕೂರು […]